ಉಡುಪಿ: ಉಡುಪಿ ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ತಾಂತ್ರಿಕ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು
ಡಿಪ್ಲೋಮಾ ಇನ್ ಪ್ರಿಸಿಶನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ಗಳು ಲಭ್ಯವಿದ್ದು, ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ
ಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ,ಕೊಳಲಗಿರಿ, ಉಡುಪಿ ಮೊಬೈಲ್ ಸಂಖ್ಯೆ 9880510585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.












