ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಅಥವಾ ಖಾಯಂ ಶಿಕ್ಷಕರು/ ಉಪನ್ಯಾಸಕರು ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಹಾಜರಾಗುವವರೆಗೂ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದೂ ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಶಿಕ್ಷಕರು / ಉಪನ್ಯಾಸಕರಿಂದ ಈ ಕೆಳಕಂಡ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ 1 ರಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾಪು ತಾಲೂಕು ಕಳತ್ತೂರು ಮೊರಾರ್ಜಿ ವಸತಿ ಶಾಲೆಯಲ್ಲಿ ಕನ್ನಡ ಶಿಕ್ಷಕರ ಹುದ್ದೆ ಖಾಲಿ ಇದ್ದು, ಮಾಹಿತಿಗಾಗಿ ಮೊ.ನಂ: 9535225409, ಶಂಕರನಾರಾಯಣದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕನ್ನಡ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇದ್ದು, ಮಾಹಿತಿಗಾಗಿ ಮೊ.ನಂ: 6363120177, ಸಿದ್ಧಾಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇದ್ದು, ಮಾಹಿತಿಗಾಗಿ ಮೊ.ನಂ: 9482487266, ಪಟ್ಲ ಹಿರೇಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇದ್ದು, ಮಾಹಿತಿಗಾಗಿ ಮೊ.ನಂ:8970292710, ಹೆರಂಜಾಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಮಾಹಿತಿಗಾಗಿ ಮೊ.ನಂ: 9480461537, ಯಡ್ಯಾಡಿ-ಮತ್ಯಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಜ್ಞಾನ, ಹಿಂದಿ ಹಾಗೂ ಆಂಗ್ಲಭಾಷೆ ಶಿಕ್ಷಕರ ಹುದ್ದೆ ಖಾಲಿ ಇದ್ದು, ಮಾಹಿತಿಗಾಗಿ ಮೊ.ನಂ: 9901519126, ವಡ್ಡರ್ಸೆ ನಾರಾಯಣಗುರು ವಸತಿ ಶಾಲೆಯಲ್ಲಿ ಕನ್ನಡ, ಗಣಿತ, ಆಂಗ್ಲಭಾಷೆ, ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಮಾಹಿತಿಗಾಗಿ ಮೊನಂ: 8867415291 ಹಾಗೂ ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಮಾಹಿತಿಗಾಗಿ ಮೊ.ನಂ: 9686898326 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.












