ಉಡುಪಿ:ಅತಿಥಿ ಶಿಕ್ಷಕರ ನೇಮಕ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೊರಾರ್ಜಿ ಟದೇಸಾಯಿ ವಸತಿ
ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dom.karnataka.gov.in ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ : 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254- 23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.