ಉಡುಪಿ:ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳ ನೋಂದಣಿ ಕಡ್ಡಾಯ

ಉಡುಪಿ: ವಿಕಲಚೇತನ ವ್ಯಕ್ತಿಗಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ
ವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಕಾಯ್ದೆಯ ಸೆಕ್ಷನ್ 50, 51 ಮತ್ತು 52 ರ ಪ್ರಕಾರ ಸೇವಾಸಿಂಧು ತಂತ್ರಾಂಶದ ಮೂಲಕ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೋಂದಣಿ ಮಾಡಿಸಿಕೊಳ್ಳಬೇಕು. ಈ ರೀತಿ ನೋಂದಣಿಯಾದ ಸಂಸ್ಥೆಗಳು ತಮ್ಮ ನೋಂದಣಿಯನ್ನು ಪ್ರತಿ 5 ವರ್ಷಗಳಿಗೊಮ್ಮೆ ನವೀಕರಿಸಬೇಕಾಗಿರುತ್ತದೆ.

ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಪ್ರಕಾರ ನೋಂದಣಿಯಾಗದೆ ವಿಕಲಚೇತನ ವ್ಯಕ್ತಿಗಳಿಗೆ ಕಾರ್ಯನಿರ್ವಹಿಸುತ್ತಿದ್ದು, ನೋಂದಣಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ/ ನವೀಕರಣ ಚಾಲ್ತಿಯಲ್ಲಿ
ಇಲ್ಲದಿರುವ ಸಂಸ್ಥೆಗಳ ವಿರುದ್ಧ ನೇರವಾಗಿ ಸಂಬAಧಪಟ್ಟ ಆರಕ್ಷಕ ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಿಸಲು ಅವಕಾಶವಿರುತ್ತದೆ.ಆದ್ದರಿಂದ ಜಿಲ್ಲೆಯಲ್ಲಿ ವಿಕಲಚೇತನ ಮಕ್ಕಳು ಮತ್ತು ವ್ಯಕ್ತಿಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಮತ್ತು ವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016 ರ ಕಾಯ್ದೆಯ ಅಡಿ ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in/Sevasindhu/DepartmentServices ನಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ನಂತರ ಭೌತಿಕ ಪ್ರತಿಯನ್ನು ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು,
ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.