ಉಡುಪಿ:ದೀರ್ಘಕಾಲದವರೆಗೆ ವಾರಸುದಾರರಿಲ್ಲದ ಬ್ಯಾಂಕ್ ಠೇವಣಿ ಹಸ್ತಾಂತರ : ವಿಶೇಷ ಶಿಬಿರ


ಉಡುಪಿ: ಜಿಲ್ಲೆಯ ಬ್ಯಾಂಕ್‌ಗಳಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನು ಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ನವೆಂಬರ್ 14 ರಂದು ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.

ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಅನುಸಾರ ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ ಡಿಸೆಂಬರ್ 31 ರ ವರೆಗೆ ನಡೆಯಲಿದೆ.

ಸೂಕ್ತ ವಾರಸುದಾರರ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಸಾರ್ವಜನಿಕರು ಅಗತ್ಯ ಸಲಹೆಯನ್ನು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಶಿಬಿರವು ಸಹಕಾರಿಯಾಗಲಿದೆ ಎಂದು ಲೀಡ್ ಬ್ಯಾಂಕ್ ಕಚೇರಿ ಪ್ರಕಟಣೆ ತಿಳಿಸಿದೆ.