ಉಡುಪಿ: ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಇಲಾಖೆಯ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ
ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 23 ರ ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












