ಉಡುಪಿ: ಏಕಾಏಕಿ ಕುಸಿದು ಬಿದ್ದು 6ನೇ ತರಗತಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಖಾಸಗಿ ಶಾಲೆಯ 6ನೇ ತರಗತಿ ಕಲಿಯುತ್ತಿದ್ದ ರ್ಯಾನ್ಸ್ ಕ್ಯಾಥಲ್ ಡಿ’ಸೋಜಾ ಮೃತ ಬಾಲಕ. ಜುಲೈ 14 ರ ಸೋಮವಾರ ರಾತ್ರಿ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗೆ ಬಾಲಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಈತ ತೊಟ್ಟಂನ ಅಶ್ವಿನ್ ಮತ್ತು ಸರಿತಾ ಡಿ’ಸೋಜಾ ದಂಪತಿಯ ಪುತ್ರ.
ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಿರಿಯರಿಂದ ಹಿಡಿದು ಹಿರಿಯವರೆಗೂ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಹೋಗುತ್ತಿದೆ.












