ಭಾರಿ ಮಳೆ ಹಿನ್ನೆಲೆ, ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಿ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈಗಾಗಲೇ ಮಳೆ ಆರ್ಭಟ ಶುರುವಾಗಿದ್ದು, ಕುಂಭದ್ರೋಣ ಮಳೆಗೆ ಕರಾವಳಿ ಜನ ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಕೊಟ್ಟಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಸೇರಿದಂತೆ 8 ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆ ಆರ್ಭಟಿಸುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 17 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.

ಇದರೊಂದಿಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಿದ್ದು, ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.