ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿರ ರಾಜ್ಯದ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಹೊರತು ಪಡಿಸಿ ಎಲ್ಲಾ ಜಿಲ್ಲೆಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕರಾವಳಿ ಹೊರತು ಪಡಿಸಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆಯಲ್ಲಿ ಭಾರೀ ಮಳೆಯಾಗಲಿದೆ. ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.












