ಉಡುಪಿ: ತೀವ್ರ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಉಡುಪಿ: ಕರಾವಳಿಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಯಲ್ಲಿ ಇಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕ್ಯಾರ್ ಚಂಡಮಾರುತದ ಭೀತಿ:
ರಾಜ್ಯದ ಕರಾವಳಿ ಪ್ರದೇಶಕ್ಕೆ ಕ್ಯಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮೀನುಗಾರರು ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ನೆರೆ ಸಮಸ್ಯೆ ಉಂಟಾದರೆ ತಕ್ಷಣ ಸ್ಪಂದಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.