ಉಡುಪಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಾದ್ಯಂತ ಇಂದು ಸಂಜೆ ಗುಡುಗು ಸಹಿತ ಭಾರಿ ಮಳೆ ಸುರಿದಿದೆ.
ಸಂಜೆ 6 ಗಂಟೆ ಸುಮಾರಿಗೆ ಶುರುವಾದ ಜಡಿ ಮಳೆಯು ಸಂಜೆ 7.30ರ ವೇಳೆಗೆ ಬಿರುಸು ಪಡೆದುಕೊಂಡಿತು. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ವರ್ಷಾಧರೆ ಆಗಿದೆ.
ಉಡುಪಿ, ಕಾರ್ಕಳ, ಹೆಬ್ರಿ, ಕಾಪು, ಪೆರ್ಡೂರು ಸಹಿತ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದೆ.