ಉಡುಪಿ: ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಹೆಲಿಕಾಪ್ಟರ್ ಕಾರ್ಯಾಚರಣೆ: ಸಚಿವ ಬೊಮ್ಮಾಯಿ

ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತಿದ್ದು, ಇದರಿಂದ ಜಿಲ್ಲೆಯ ಹಲವು ಕಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಪ್ರವಾಹದಿಂದ ಕೆಲವು ಗ್ರಾಮಗಳು ಜಲಾವೃತಗೊಂಡಿವೆ. ಹಾಗಾಗಿ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲು ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನಿಯೋಜಿಸಲು ಮನವಿ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಈ ಬಗ್ಗೆ ಕಂದಾಯ ಸಚಿವ ಜತೆಗೆ ಚರ್ಚಿಸಿ ಹೆಲಿಕಾಪ್ಟರ್ ನಿಯೋಜನೆ ಮಾಡಲಾಗುವುದು ಎಂದರು.
ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಈಗಾಗಲೇ 250 ಮಂದಿಯ ಎನ್ ಡಿಆರ್ ಎಫ್ ತಂಡವನ್ನು ಕಳುಹಿಸಲಾಗಿದೆ. ಶೀಘ್ರವೇ ಎನ್ ಡಿಆರ್ ಎಫ್ ತಂಡ ಸ್ಥಳಕ್ಕೆ ತಲುಪಲಿದೆ. ಈಗಾಗಲೇ 200 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಎಲ್ಲ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.