ಉಡುಪಿ:ಶೌಚಾಲಯ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ
ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಶೌಚಾಲಯ ನಿರ್ಮಿಸಲು ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.