ಉಡುಪಿ: ದ.ಕ ಜಿಲ್ಲೆಯ ಬಜೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಯಿತು.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದೊದಗಿದೆ. ಸುಹಾಸ್ ಶೆಟ್ಟಿಯ ಹತ್ಯೆಯಿಂದ ಬಹಳ ನೋವಾಗಿದೆ. ಮತಬ್ಯಾಂಕ್ ರಾಜಕಾರಣ, ಮುಸ್ಲಿಂ ಒಲೈಕೆಯಿಂದಾಗಿ ಈ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನನಿಬಿಡ ಪ್ರದೇಶದಲ್ಲಿ ಯಾರ ಭಯವೂ ಇಲ್ಲದೇ ಕೊಲೆ ಮಾಡಿದ್ದಾರೆ. ಪೋಲಿಸ್ ಇಲಾಖೆ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದರು.
ಕುಂದಾಪುರ ಶಾಸಕ ಕಿರಣ್ ಕೊಡ್ಲಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ ಸಹಿತ ಪ್ರತಿಭಟನೆಯಲ್ಲಿ ಹಲವರು ಭಾಗಿಯಾದರು.












