ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ: ಮೇಲ್ವಿಚಾರಣೆಗೆ ಅಧಿಕಾರಿಗಳ ನೇಮಕ

ಉಡುಪಿ, ಡಿ.17: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ ಜನವರಿ 1 ರ ವರೆಗೆ ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿ.ಎಲ್.ಓ ರನ್ನು ಒಳಗೊಂಡ ತಂಡಗಳನ್ನು ರಚಿಸಿಕೊಂಡು ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಮನೆಗಳಿಗೆ ಭೇಟಿ ನೀಡಿ, ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದ, ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನ ಮೀರಿದ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ಮೀರಿದ 2 ನೇ ಡೋಸ್ ಪಡೆಯದವರನ್ನು ಪತ್ತೆಹಚ್ಚಿ ಪಂಚಾಯತ್ ವ್ಯಾಪ್ತಿಯಲ್ಲಿ ಲಸಿಕಾ ಶಿಬಿರ ಏರ್ಪಡಿಸಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ ಶೇ. 100 ರಷ್ಟು ಲಸಿಕಾ ಸಾಧನೆ ಮಾಡಬೇಕಾಗಿರುವುದರಿಂದ, ಸದ್ರಿ ಕಾರ್ಯಕ್ರಮವನ್ನು ಗ್ರಾಮಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿರುತ್ತದೆ.

ನಿಯೋಜಿತ ಅಧಿಕಾರಿಗಳು ಸಂಬoಧಪಟ್ಟ ಪಂಚಾಯತಿಗೆ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸಿ, ಲಸಿಕಾ ತಂಡಕ್ಕೆ ಮತ್ತು ಪಂಚಾಯತ್ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ಕೋವಿಡ್ ವ್ಯಾಕ್ಸಿನೇಷನ್ ಶೇ. 100 ರ ಪ್ರಗತಿ ಸಾಧಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.