ಉಡುಪಿ: ಹನಿಟ್ರ್ಯಾಪ್ ನಡೆಸಿದ ಆರೋಪದಡಿ ಯುವಕನೋರ್ವನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಂಜಿತ್ ಎಸ್.ಹೆಂಗವಳ್ಳಿ (26) ಎಂದು ಗುರುತಿಸಲಾಗಿದೆ. ಈತ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸುವ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ದೂರಿನ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಡಿ.17ರಂದು ಬಂಧಿಸಿದ್ದಾರೆ. ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.