ಉಡುಪಿ:ತೋಟಗಾರಿಕೆ ಇಲಾಖೆಯ ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ
ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಲಭ್ಯವಿದ್ದು, ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಗೇರು, ಜಾಯಿಕಾಯಿ, ಅನಾನಸ್ಸು, ಅಂಗಾAಶಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂಟಾನ್, ಮ್ಯಾಂಗೋಸ್ಟೀನ್ ಮತ್ತು ಡ್ರ್ಯಾಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ಸಣ್ಣ ಸಸ್ಯಾಗಾರಗಳ/ ನರ್ಸರಿಗಳಳ ಸ್ಥಾಪನೆಗೆ ಶೇ.50 ರ ದರದಲ್ಲಿ (ಗರಿಷ್ಠ ರೂ. 10 ಲಕ್ಷಗಳು) ಸಹಾಯಧನ, ಸಸ್ಯಾಗಾರಗಳ ಉನ್ನತೀಕರಣಕ್ಕಾಗಿ ಶೇ. 50 ರ ಸಹಾಯಧನದಲ್ಲಿ ಪ್ರತಿ ಹೆಕ್ಟೇರ್‌ಗೆ 2 ಲಕ್ಷ ರೂ. ಗಳಂತೆ 2.00 ಹೆಕ್ಟೇರ್‌ಗೆ 4 ಲಕ್ಷ ರೂ.ಗಳ ಸಹಾಯಧನ, ಅಂಗಾAಶ ಕೃಷಿ ಘಟಕ ಸ್ಥಾಪನೆಗೆ ಶೇ. 40 ರಂತೆ ಸಹಾಯಧನ, ನೀರು ಸಂಗ್ರಹಣಾ ಘಟಕ (20203 ಮೀ.ಅಳತೆ) ನಿರ್ಮಾಣಕ್ಕೆ ಗರಿಷ್ಟ 0.75 ಲಕ್ಷ ರೂ. ಸಹಾಯಧನ, ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟು ಮಾಡುವ ರೋಗ/ಕೀಟಗಳ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಿಗಳಿಗೆ ಪ್ರತಿ ಹೆಕ್ಟೇರಿಗೆ 1,500 ಹಾಗೂ ಅಡಿಕೆ ತೋಟ ಹೊಂದಿರುವ ರೈತರಿಗೆ ಅಡಿಕೆ ಸಂರಕ್ಷಣೆ/ ಒಣಗಿಸಲು ಸೋಲಾರ್ ಶೀಟ್ ಖರೀದಿಗೆ ಶೇ.40 ರ ಸಹಾಯಧನ, ವಿವಿಧ ಜಾತಿಯ ಅಣಬೆ ಉತ್ಪಾದನೆಗಾಗಿ ಅಣಬೆ
ಉತ್ಪಾದನಾ ಘಟಕ, ಸ್ಪಾನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಶೇ. 40 ರ ಗರಿಷ್ಠ ರೂ. 8 ರಿಂದ 12 ಲಕ್ಷ ರೂ.ಗಳ ಸಹಾಯಧನ, ರೈತರ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ವಿವಿಧ ಸಂಸ್ಥೆಗಳು ಸ್ಥಾಪಿಸುವ ಗ್ರಾಮೀಣ ಮಾರುಕಟ್ಟೆ, ರೈತ ಸಂತೆ, ನೇರ ಮಾರುಕಟ್ಟೆ ಸ್ಥಾಪಿಸಲು ಶೇ. 40ರ ಗರಿಷ್ಠ 10 ಲಕ್ಷ ರೂ.ಗಳ ಸಾಲ ಆಧಾರಿತ ಸಹಾಯಧನ ಲಭ್ಯವಿದೆ.

ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ.35 ರ ದರದಲ್ಲಿ (ಗರಿಷ್ಠ 12.25 ಲಕ್ಷಗಳವರೆಗೆ), ಪ್ಯಾಕ್ ಹೌಸ್‌ಗಳ ನಿರ್ಮಾಣಕ್ಕೆ ಗರಿಷ್ಠ 2.40 ಲಕ್ಷಗಳವರೆಗೆ ಶೇ.50 ರ ವರೆಗೆ ಹಾಗೂ ರೈತರ ಯಾಂತ್ರೀಕರಣ ಅವಶ್ಯಕತೆಗೆ 20 hಠಿ ಗಿಂತ ಕಡಿಮೆ ಸಾಮರ್ಥ್ಯದ ಟ್ರ‍್ಯಾಕ್ಟರ್ ಹಾಗೂ ಟಿಲ್ಲರ್ ಖರೀದಿಗೆ ಗರಿಷ್ಠ 2.45 ಲಕ್ಷ ರೂ. ವರೆಗೆ ಸಹಾಯಧನ ಲಭ್ಯವಿದೆ.

ತೋಟಗಾರಿಕೆ ಬೆಳೆಗಳಿಗೆ ಬಳಸುವ ಪ್ಲಾಸ್ಟಿಕ್ ಹೊದಿಕೆ/ ಮಲ್ಚಿಂಗ್‌ಗಳಿಗೆ ಶೇ. 50 ರ ದರದಲ್ಲಿ ಪ್ರತಿ ಹೆಕ್ಟೇರ್‌ಗೆ 20,000 ರೂ.ಸಹಾಯಧನ, ತೋಟಗಳಲ್ಲಿ ಕಳೆ ನಿಯಂತ್ರಣಕ್ಕಾಗಿ ವೀಡ್ ಮ್ಯಾಟ್ ಬಳಕೆಗೆ ಶೇ. 50 ರ ಸಹಾಯಧನದಲ್ಲಿ 25000 ರೂ. ಪ್ರತಿ ಹೆಕ್ಟೇರ್‌ಗೆ ಸಹಾಯಧನ ಹಾಗೂ ಹಸಿರುಮನೆ/ ನೆರಳು ಪರದೆಗಳ ನಿರ್ಮಾಣಕ್ಕಾಗಿ ಪ್ರತಿ ಫಲಾನುಭವಿಗೆ ಗರಿಷ್ಠ 2500 ಚದರ ಮೀಟರ್ ವರೆಗೆ ಶೇ. 50 ರ ಸಹಾಯಧನ ಲಭ್ಯವಿದೆ.
ಕೃಷಿ ಯಾಂತ್ರೀಕರಣ ಉಪಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ವಿವಿಧ ಯಂತ್ರೋಪಕರಣಗಳಿಗೆ ಶೇ. 40/50 ರ ಸಹಾಯಧನ ಹಾಗೂ ದೊಡ್ಡ ಗಾತ್ರದ ನೀರು ಸಂಗ್ರಹಣಾ ಘಟಕಗಳಾದ
2500 ಘನ ಮೀ.ಅಳತೆಗೆ 1.50 ಲಕ್ಷ ರೂ., 4500 ಘನ ಮೀ.ಅಳತೆಗೆ 2.80 ಲಕ್ಷ ರೂ., 6500 ಘ.ಮೀ.ಅಳತೆಗೆ 4 ಲಕ್ಷ ರೂ. ಹಾಗೂ 9000 ಘನ ಮೀ.ಅಳತೆಯ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ಹಾಗೂ ಪ್ಯಾಕಿಂಗ್ ಮತ್ತು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರ ಮತ್ತು ಲಘುಪೋಷಕಾಂಶಗಳ ಖರೀದಿಗೆ ಸಹಾಯಧನ ಪಡೆಯಲು ಅವಕಾಶವಿದೆ.

ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ /ತುಂತುರು ನೀರಾವರಿ ಅಳವಡಿಕೆಗೆ ರೈತರಿಗೆ ಶೇ.90 ರಷ್ಟು ಸಹಾಯಧನ, ಭವಿಷ್ಯದ ಬೆಳೆಯಾದ ತಾಳೆ ಬೆಳೆಗಾಗಿ ತಾಳೆಬೆಳೆ ಯೋಜನೆಯಡಿ ಹೊಸದಾಗಿ ತಾಳೆಬೆಳೆ ಪ್ರದೇಶ ವಿಸ್ತರಣೆಗೆ ಉಚಿತ ವಿತರಣೆಯೊಂದಿಗೆ 4 ವರ್ಷಗಳ ಕಾಲ ನಿರ್ವಹಣಾ ವೆಚ್ಚ ಪಾವತಿ ಹಾಗೂ ತಾಳೆ ಬೆಳೆ ಬೆಳೆಯುವ ರೈತರಿಗೆ ಬೋರ್ವೆಲ್, ಬಾವಿ ನಿರ್ಮಿಸಿಕೊಳ್ಳಲು, ವಿದ್ಯುತ್/ಡೀಸೆಲ್
ಪಂಪ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಬಹುದಾಗಿದೆ.

ಸೋಲಾರ್ ಪಂಪ್‌ಸೆಟ್‌ಗಳ ಖರೀದಿಗೆ ಇಲಾಖೆಯಿಂದ ಶೇ. 50 ರ ಸಹಾಯಧನ, 3 ಹೆಚ್.ಪಿ ಪಂಪ್‌ಸೆಟ್‌ಗೆ ಒಟ್ಟು ವೆಚ್ಚ 2 ಲಕ್ಷ
ರೂ.ಗಳಿದ್ದು, 1 ಲಕ್ಷ ರೂ. ಸಹಾಯಧನ ಹಾಗೂ 5 ಹೆಚ್.ಪಿ ಮೇಲ್ಪಟ್ಟ ಪಂಪ್‌ಸೆಟ್‌ಗೆ ಒಟ್ಟು ವೆಚ್ಚ 3 ಲಕ್ಷ ರೂ.ಗಳಿಗೆ 1.50 ಲಕ್ಷ ರೂ.ಸಹಾಯಧನ ಲಭ್ಯವಿದ್ದು, ಈ ವೆಚ್ಚದಲ್ಲಿ ಸೋಲಾರ್ ಪ್ಯಾನಲ್, ಕೇಬಲ್, ನಿಯಂತ್ರಣ ಘಟಕಗಳು ಹಾಗೂ ಪಂಪ್‌ಗಳನ್ನು ಒಳಗೊಂಡಿರುತ್ತದೆ. ಸೌರಶಕ್ತಿ ಬಳಸಿ ತೋಟಗಾರಿಕೆ ಉತ್ಪನ್ನಗಳನ್ನು ಒಣಗಿಸುವ ಸಲುವಾಗಿ ಬಳಸುವ ಸೋಲಾರ್ ಶೆಡ್‌ಗಳ ನಿರ್ಮಾಣಕ್ಕೆ ಇಲಾಖಾ ಸಹಾಯಧನ ಪಡೆಯಬಹುದಾಗಿದೆ. ಮಹಾತ್ಮಾಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ
ಪ್ರದೇಶ ವಿಸ್ತರಣೆ ಹಾಗೂ ಪೌಷ್ಠಿಕ ತೋಟಗಳ ನಿರ್ಮಾಣಕ್ಕೆ ಅವಕಾಶವಿರುತ್ತದೆ.

ಈ ಎಲ್ಲಾ ಯೋಜನೆಗಳ ಪ್ರಯೋಜನೆ ಪಡೆಯಲು ಆಸಕ್ತ ರೈತರು ಪ್ರಥಮ ಹಂತದಲ್ಲಿ ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಇಲಾಖಾ
ಮಾರ್ಗಸೂಚಿಯನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗಧಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.