ಉಡುಪಿ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಹಣಾ ಅಧ್ಯಕ್ಷರಾದ ಡಾ.ಟಿ.ಶಾಂ ಭಟ್ ಹಾಗೂ
ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಫೆಬ್ರವರಿ 18 ಮತ್ತು 19 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಆಯೋಗದ ಮುಂದೆ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ನಡೆಸುವುದರ ಜೊತೆಗೆ ಮಾನವ ಹಕ್ಕು ಉಲ್ಲಂಘನೆಗಳಿಗೆ ಸಂಬಂಧಿಸಿದ ಹೊಸ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಫೆ. 19 ರಂದು ಮಣಿಪಾಲದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪೂರ್ಣ ಪೀಠ ಸಭೆಗಳನ್ನು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಹಾಗೂ ಮಾನವ ಹಕ್ಕು ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹೊಸ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಅಂದು ಸಲ್ಲಿಸಬಹುದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
















