ಉಡುಪಿ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗ ಇವರ ವತಿಯಿಂದ ಬೈಂದೂರು ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವು ಡಿಸೆಂಬರ್ 27 ರಂದು ಬೆಳಗ್ಗೆ 11.30 ಕ್ಕೆ ಬೈಂದೂರು ಕ.ರಾ.ರ.ಸಾ.ನಿಗಮ ಬಸ್ ನಿಲ್ದಾಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ
ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ
ಎಸ್.ಅರ್.ಶ್ರೀನಿವಾಸ್ (ವಾಸು), ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಬೆಂಗಳೂರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಬೈಂದೂರು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ, ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

















