ಉಡುಪಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟನೆ

ಉಡುಪಿ: ಬಿಜೆಪಿ ಉಡುಪಿ ನಗರ ಹಾಗೂ ನಗರ ಬಿಜೆಪಿಯ ಎಲ್ಲಾ ಮೋರ್ಚಾಗಳ ಸಹಭಾಗಿತ್ವದಲ್ಲಿ ಶಾಸಕ ಕೆ.ರಘುಪತಿ ಭಟ್ ಅವರ ಜನ್ಮದಿನದ ಪ್ರಯುಕ್ತ ಇಂದು ಕೆಎಂಸಿ ಆಸ್ಪತ್ರೆಯಲ್ಲಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಪಂ ಅಧ್ಯಕ್ಷ ದಿನಕರ್ ಬಾಬು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸದಸ್ಯ ಸುವರ್ಧನ್, ಸತೀಶ್ ಸಾಲ್ಯಾನ್, ಮತ್ತು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ರಕ್ತ ನಿಧಿ ವಿಭಾಗದ ಮುಖ್ಯಸ್ಥೆ ಡಾ.ಶಮಿ ಶಾಸ್ತ್ರಿ, ಪ್ರಭುದೇವ ವಾನೆ, ಜಯ ವಿಠ್ಠಲ್ ಉಪಸ್ಥಿತರಿದ್ದರು.