ಉಡುಪಿ:ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಅರ್ಹ ನವ ಕಾನೂನು ಪದವೀಧರರಿಗೆ ವಕೀಲರ ವೃತ್ತಿಯಲ್ಲಿ ಉತ್ತೇಜನ ನೀಡಲು ಪ್ರತಿ ತಿಂಗಳು ರೂ.2,000 ಗಳ ಪ್ರೋತ್ಸಾಹಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 2024 ರ ಜೂನ್ 1 ರಿಂದ 2025 ರ ಮೇ 31 ರ ಅವಧಿಯೊಳಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ವಕೀಲರ ವೃತ್ತಿಗೆ ನೋಂದಾಯಿಸಿಕೊ೦ಡಿರಬೇಕು. ಅಭ್ಯರ್ಥಿಯ ಅಥವಾ ಅವರ ಕುಟುಂಬದ ವಾರ್ಷಿಕ ಆದಾಯವು ರೂ.40,000/- ಮೀರಿರಬಾರದು. ಅರ್ಜಿಯೊಂದಿಗೆ ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದವರು ಅಥವಾ ಸೇವೆಯಿಂದ ವಜಾಗೊಂಡವರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅನರ್ಹರಾಗಿದ್ದು ಈಗಾಗಲೇ ಸರ್ಕಾರದ ಬೇರೆ ಯಾವುದೇ ಯೋಜನೆಯಡಿ ಇಂತಹ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆಯ ದಿನ. ನೇಮಕಾತಿ ಅಧಿಸೂಚನೆ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ನ್ಯಾಯಾಧೀಶರು / ಅಧ್ಯಕ್ಷರು, ನವ ಕಾನೂನು ಪದವೀಧರರಿಗೆ ಪ್ರೋತ್ಸಾಹಧನದ ಅನುದಾನವನ್ನು ಬಿಡುಗಡೆ ಮಾಡುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.