ಉಡುಪಿ: ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ಆಯಾ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ನವೆಂಬರ್ 26 ರ
ಒಳಗಾಗಿ ಇಲಾಖೆಯ ಕಛೇರಿಗೆ ಖುದ್ದಾಗಿ ಅಥವಾ https://udupi.nic.in ವೆಬ್ಸೈಟ್ ನಲ್ಲಿ ಅಥವಾ ಅಂಚೆ ಮೂಲಕ
ಸಲ್ಲಿಸಬಹುದಾಗಿದೆ.
10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಮತ್ತು ಸರಾಸರಿ ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಪ್ರವರ್ಗ-1
ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ ಮತ್ತು 3ಬಿ ಕುಟುಂಬದ ವಾರ್ಷಿಕ ಆದಾಯ ರೂ. 1.00 ಲಕ್ಷ
ಮೀರದ 26-11-2005 ರಿಂದ 26-11-2008ರ ನಡುವಿನ ಅವಧಿಯಲ್ಲಿ ಜನಿಸಿರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ತರಬೇತಿಯನ್ನು ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ, ಬಾರ್ಕೂರು, ಬ್ರಹ್ಮಾವರ ತಾಲೂಕು ಇಲ್ಲಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ:304, ಬಿ-ಬ್ಲಾಕ್, 2ನೇ ಮಹಡಿ, ರಜತಾದ್ರಿ
ಮಣಿಪಾಲ ಅಥವಾ ದೂ.ಸಂ: 0820-2574881 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


















