ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ., ಕಿನ್ನಿಮುಲ್ಕಿ ಮತ್ತು ಕರ್ನಾಟಕ ಲೋಕಾಯುಕ್ತ ಉಡುಪಿ ಜಿಲ್ಲೆ ಸಹಯೋಗದಲ್ಲಿ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಅರಿವು ಸಪ್ತಾಹ- 2025 ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅರುಣ ಕುಮಾರ್ ಶೆಟ್ಟಿ ಉದ್ಘಾಟಿಸಿದರು.
ಮುಖ್ಯ ಅಥಿತಿಯಾಗಿ ಶ್ರೀ ರಾಜೇಂದ್ರ ನಾಯ್ಕ್ ( ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್) ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಎಂ ಗಣೇಶ್ ಕಿಣಿ, ಹಿರಿಯ ನಿರ್ದೇಶಕರಾದ ಶ್ರೀ ನಾರಾಯಣ ಬಲ್ಲಾಳ್, ನಿರ್ದೇಶಕರಾದ ಶ್ರೀ ಅಬ್ದುಲ್ಲಾ ಎಚ್ ಸಾಹೇಬ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಹೆಗ್ಡೆ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


















