ಉಡುಪಿ:ಖಾಲಿ ನಿವೇಶನಗಳ ಗಿಡಗಂಟಿ ತೆರವುಗೊಳಿಸಲು ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶನಗಳಲ್ಲಿ ಹುಲ್ಲು, ಗಿಡಗಂಟಿಗಳು ಬೆಳೆದು ವಿಷಕಾರಿ ಹಾವು, ಜೀವಜಂತುಗಳ ವಾಸಸ್ಥಳವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ತಮ್ಮ ಮನೆ ಪರಿಸರದಲ್ಲಿ ಹಾಗೂ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಹುಲ್ಲು, ಗಿಡಗಂಟಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ತೆರವುಗೊಳಿಸಿ ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.