ಉಡುಪಿ:ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ, ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಢಾವೋ ಅಭಿಯಾನದಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 9 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠದ ಆವರಣದ ರಾಜಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ
ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ,
ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ
ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹಿರಿಯ ಸಿವಿಲ್ ನ್ಯಾಯಾಧೀಶ ಮನು ಪಟೇಲ್ ಬಿ.ವೈ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.