ಉಡುಪಿ:ಪುಸ್ತಕ ಬಹುಮಾನಕ್ಕೆ ಜಾನಪದ ಕೃತಿಗಳ ಆಹ್ವಾನ

ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ
ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ, ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.

ಪುಸ್ತಕ ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು ಹಾಗೂ ಸಂಪಾದಕರು ತಮ್ಮ ಒಂದು ಕೃತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಮೇ 20 ರ ಒಳಗಾಗಿ ಖುದ್ದಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.