ಉಡುಪಿ:ಐ.ಟಿ.ಐ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಬೈಂದೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐ.ಟಿ.ಐ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟಿçಕ್ ವೆಹಿಕಲ್, ಸಿ.ಎನ್.ಸಿ ಮೆಷಿನಿಂಗ್ ಟೆಕ್ನಿಷಿಯನ್, ವರ್ಚುಯಲ್ ಅನಾಲಿಸಿಸ್ ಅಂಡ್ ಡಿಸೈನರ್ – ಎಫ್.ಇ.ಎಮ್, ಇಂಡಸ್ಟ್ರಿಯಲ್ ರೊಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಮ್ಯಾನ್ಯುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ ಹಾಗೂ ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಕೋರ್ಸುಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬೈಂದೂರು ದೂ.ಸಂಖ್ಯೆ : 08254-251009 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.