ಉಡುಪಿ: ಇಲ್ಲಿನ ಜಾಮಿಯಾ ಮಸೀದಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾಪು ತಹಶೀಲ್ದಾರ್ ಮುಹಮ್ಮದ್ ಇಸ್ಹಾಕ್ ಧ್ವಜಾರೋಹಣ ನೆರವೇರಿಸಿದರು.
ಜಾಮಿಯಾ ಮಸೀದಿಯ ಧರ್ಮಗುರುಗಳಾದ ಮೌಲಾನಾ ರಶೀದ್ ಅಹ್ಮದ್ ನದ್ವಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಮಸೀದಿಯ ಅಧ್ಯಕ್ಷ ಅರ್ಷದ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಉಮರ್ ವಿ. ಎಸ್.,
ರಿಯಾಝ್ ಅಹ್ಮದ್, ಮಸೀದಿಯ ಆಡಳಿತ ಸಮಿತಿ ಸದಸ್ಯರು, ಮಸೀದಿಯ ಜಮಾಅತಿಗಳು ಉಪಸ್ಥಿತರಿದ್ದರು.