ಉಡುಪಿ ಸೆಪ್ಟಂಬರ್ 03: ಕಾಪು ತಾಲೂಕು ನಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ಶಿವರಾಮ ಪೂಜಾರಿ (41) ಎನ್ನುವ ವ್ಯಕ್ತಿಯು ಮೂಲ್ಕಿಯಲ್ಲಿ ಜೆಸಿಬಿ ಆಪರೇಟಿಂಗ್ ಕೆಲಸ ಮಾಡಿಕೊಂಡಿದ್ದು, ಆಗಸ್ಟ್ 23 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 1 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪಡುಬಿದ್ರೆ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.















