ಕೇಂದ್ರ ಸರಕಾರ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ: ಯೋಗೀಶ್ ಶೆಟ್ಟಿ

ಉಡುಪಿ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರಕಾರ ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ತಿಳಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೇಂದ್ರದ ಸಂಸ್ಥೆಗಳಾದ ಐಟಿ, ಇಡಿ ಮುಂತಾದ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ. ದ್ವೇಷಕ್ಕಾಗಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.