ಉಡುಪಿ: ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ವತಿಯಿಂದ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಕೇಂದ್ರ ಕಚೇರಿ ಮಾಳ ಪೇರಡ್ಕ ವಠಾರದಲ್ಲಿ ಆಚರಿಸಲಾಯಿತು.
ಜಿಲ್ಲಾಧ್ಯಕ್ಷ ಮಂಜಪ್ಪ ಗೌಡ ನೂರಾಳ್ ಬೆಟ್ಟು ಅವರು ಧ್ವಜಾರೋಹಣ ನೆರವೇರಿಸಿದರು.
ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಅವರು ಮಾತನಾಡಿ, ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟಂತಹ ಹೋರಾಟಗಾರರನ್ನು ಸ್ಮರಿಸಿ ಅವರ ಆದರ್ಶ ಪಾಲನೆ ಮಾಡುವುದರ ಜೊತೆಗೆ ದೇಶಕ್ಕಾಗಿ ತಮ್ಮ ಸಮಯ ಮೀಸಲಿಡಬೇಕು ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಗಂಗಾಧರ ಗೌಡ, ಜಿಲ್ಲಾ ಸಂಘದ ಉಪಾಧ್ಯಕ್ಷ ಗೋಪಾಲ ಗೌಡ, ಪ್ರಧಾನ ಕಾರ್ಯದರ್ಶಿ ಸಾಧು ನಾರ್ಜೆ, ಸಹ ಕಾರ್ಯದರ್ಶಿ ಕಾವ್ಯ ಶಿರ್ಲಾಲು, ಕೋಶಾಧಿಕಾರಿ ವಿಷ್ಣುಮೂರ್ತಿ ಕೆರ್ವಾಶೆ, ಸಂಘಟನಾ ಕಾರ್ಯದರ್ಶಿ ಬಾಸ್ಕರಗೌಡ, ಪ್ರಕಾಶ್ ಅಂಡಾರು, ವಕ್ತಾರ ಸುಂದರ ರೆಂಜಾಳ, ಕಾರ್ಕಳ ತಾಲೂಕು ಸಮಿತಿಯ ಅಧ್ಯಕ್ಷ ಶೇಖರ ಗೌಡ, ಪ್ರಧಾನ ಕಾರ್ಯದರ್ಶಿ ಅಶೋಕ್ ಗೌಡ ಕೆರ್ವಾಶೆ ಮತ್ತಿತರರು ಉಪಸ್ಥಿತರಿದ್ದರು .
ಧ್ವಜವಂದನೆ ಕಾರ್ಯಕ್ರಮವನ್ನು ಪ್ರಶಾಂತ್ ಹೆರ್ಮುಂಡೆ ನಡೆಸಿಕೊಟ್ಟರು .
ಸಂಘದ ಜಿಲ್ಲಾ ಸಮಿತಿಯ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.