ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಿಳಾ ಉದ್ಧೇಶಿತ ಆಯವ್ಯಯದಡಿ ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರ ಮಹಿಳೆಯರು ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.
ಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ ₹ 15 ಸಾವಿರ ಸ್ಟೈಫಂಡ್ ನೀಡಲಾಗುವುದು.
ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.
ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆಯ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ಜನವರಿ 27ರೊಳಗೆ ಸಲ್ಲಿಸಬೇಕು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನಾಯರ್ ಕೆರೆ, ಬ್ರಹ್ಮಗಿರಿ, ಉಡುಪಿ ದೂರವಾಣಿ ಸಂಖ್ಯೆ : 0820-2985242 ಸಂಪರ್ಕಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.