ಪತ್ರಕರ್ತರು ಸಮಾಜದಲ್ಲಿನ ಸಮಸ್ಯೆಗಳಿಗೆ ತಮ್ಮ ಹರಿತವಾದ ಲೇಖನಿಗಳ ಮೂಲಕ ಜಾಗೃತಿ ಮೂಡಿಸುತ್ತಾರೆ: ಯಶ್‍ಪಾಲ್

ಪತ್ರಕರ್ತರು ಸಮಾಜದಲ್ಲಿನ ಸಮಸ್ಯೆಗಳಿಗೆ ತಮ್ಮ ಹರಿತವಾದ ಲೇಖನಿಗಳ ಮೂಲಕ ಜಾಗೃತಿ ಮೂಡಿಸುತ್ತಾರೆ. ದಿನದ ಇಪ್ಪತ್ತನಾಲ್ಕು ಗಂಟೆಯೂ ದಣಿವರಿಯದೇ ಸೇವೆ ಸಲ್ಲಿಸುವ ಜಿಲ್ಲೆಯ ಪತ್ರಕರ್ತರು ಕ್ರೀಡಾಕೂಟ ಏರ್ಪಡಿಸುವ ಮೂಲಕ ಕೀಡಾ ಸ್ಪೂರ್ತಿ ಮೆರೆದಿರುವುದು ಶ್ಲಾಘನೀಯ ಎಂದು ಮೀನುಗಾರಿಕ ಮಂಡಳಿ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಮಂಗಳವಾರ ಅಜ್ಜರಕಾಡು ಕ್ರೀಡಾಂಗದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನುದ್ದೇಶಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾದ ಬಡಗಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ, ಆದರೆ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ಎಂದರು.

ದ.ಕ ಮತ್ತು ಉಡುಪಿ ಜಿಲ್ಲಾ ಪ್ರಭಾರ ವಾರ್ತಾಧಿಕಾರಿ ಖಾದರ್ ಶಾ, ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಪ್ರ. ಕಾರ್ಯದರ್ಶಿ ಸಂತೋಷ ಸರಳೇಬೆಟ್ಟು, ಕ್ರೀಡಾ ಕಾರ್ಯದರ್ಶಿ ಹರೀಶ್ ಪಾಲೆಚ್ಚಾರ್, ಪ್ರೆಸ್ ಕ್ಲಬ್ ಸಂಚಾಲಕ ನಾಗರಾಜ್ ರಾವ್, ಜೊತೆ ಕಾರ್ಯದರ್ಶಿ ಮೈಕಲ್ ರಾಡ್ರೀಗಸ್ ಉಪಸ್ಥಿತರಿದ್ದರು. ಕೋಶಾಧಿಕಾರಿ ದಿವಾಕರ್ ಹಿರಿಯಡಕ ನಿರ್ವಹಿಸಿದರು.