ಉಡುಪಿ, ಜೂ.25: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಹಿರಿಯ ಪತ್ರಕರ್ತ ಹಾಗೂ ಅಂಕಣ ಕಾರ ರಾಜಾರಾಂ ತಲ್ಲೂರು ‘ಮಾಧ್ಯಮ: ಮುಂದಿನ 10ವರ್ಷಗಳ- ಮಿಡಿಯಾ ಕನ್ವರ್ಜೆನ್ಸ್, ಎಲ್‌ಎಲ್‌ಎಂ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು.
ಮಣಿಪಾಲ ಎಚ್‌ಪಿಆರ್ ಸಂಸ್ಥೆಗಳ ಮುಖ್ಯಸ್ಥ ಹರಿಪ್ರಸಾದ್ ರೈ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಿರುವರು. ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಲೆವೂರು ದಿನೇಶ್ ಕಿಣಿ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಿರುವರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಕುಂಜೂರು ಲಕ್ಷ್ಮೀನಾರಾಯಮ ಕುಂಡಂತಾಯ ಅವರಿಗೆ ಪ್ರತಿಕಾ ದಿನದ ಗೌರವವನ್ನು ಸಲ್ಲಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ












