ಉಡುಪಿ: ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು. ಭಾರತೀಯ ಸೈನಿಕರಿಗೆ ಶಕ್ತಿ ತುಂಬಲು ಉಡುಪಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ಗಡಿಯಲ್ಲಿ ದೇಶಕ್ಕಾಗಿ ಸೇವೆ ಮಾಡುತ್ತಿರುವ ಸೈನಿಕರಿಗೆ ಶಕ್ತಿ ತುಂಬುವ ಸಲುವಾಗಿ ಮಹಿಷಮರ್ದಿನಿ ದೇವಿಗೆ ವಿಶೇಷ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ದೇವಾಲಯದ ಆಡಳಿತ ಮಂಡಳಿಯಿಂದ ವಿಶೇಷ ಪೂಜೆ, ಪ್ರಾರ್ಥನೆ ನಡೆಯಿತು.












