ಉಡುಪಿ: ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ 41ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಕಡಿಯಾಳಿಯ ಶ್ರೀ ಮಹಿಷಾಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.
ವೇದಮೂರ್ತಿ ಪಾಡಿಗಾರು ಶ್ರೀನಿವಾಸ್ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಗಳು ನಡೆದವು. ಶ್ರೀದೇವರಿಗೆ ವಿಶೇಷ ಅಲಂಕಾರ, ವಿಶೇಷವಾಗಿ ರಚಿಸಿದ ಮಂಡಲದಲ್ಲಿ ಕಳಶ ಪ್ರತಿಷ್ಠೆ, ಸಾಮೂಹಿಕ ಕುಂಕುಮ ಅರ್ಚನೆ, ಲಲಿತಾ ಸಹಸ್ರನಾಮ ಪಠಣೆ, ಮಹಾಪೂಜೆ ನೆರವೇರಿತು.
ಧಾರ್ಮಿಕ ಸಭಾಕಾರ್ಯದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ದೇವಳದ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷರಾದ ವಿಜಯ ರಾಘವೇಂದ್ರ, ಲೇಖಕಿ ಪೂರ್ಣಿಮಾ ಸುರೇಶ್ ನಾಯಕ್ ಭಾಗವಹಿಸಿದ್ದರು.












