ಉಡುಪಿ: ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗೆ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಕ್ಕೆಲಗಳ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಗೊಂಡಿದೆ.
ಕರಾವಳಿ ಬೈಪಾಸ್‌ನಿಂದ ಆದಿಉಡುಪಿ ಪ್ರೌಢಶಾಲೆಯವರೆಗಿನ ಎರಡು ಬದಿಗಳಲ್ಲಿನ ಅಂಗಡಿ ಮುಗ್ಗಟ್ಟು, ಹೊಟೇಲ್ ಸೇರಿದಂತೆ ವಿವಿಧ ಕಟ್ಟಡಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗುತ್ತಿದೆ. ಈಗಾಗಲೇ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ಎರಡು ಬದಿಗಳಲ್ಲಿರುವ 190 ಕಟ್ಟಡಗಳನ್ನು ಗುರುತಿಸಲಾಗಿದ್ದು, ಇದೀಗ ಕರಾವಳಿ ಬೈಪಾಸ್‌ನಿಂದ ಆದಿಉಡುಪಿವರೆಗಿನ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಕೆಲವು ಮಾಲಕರು ತೀರಾ ಕಡಿಮೆಯಾಗಿರುವ ಪರಿಹಾರ ಧನವನ್ನು ಪಡೆಯಲು ನಿರಾಕರಿಸಿರುವುದರಿಂದ ಕಟ್ಟಡ ತೆರವಿಗೆ ಅಡ್ಡಿಯಾಗಿತ್ತು. ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿ ಈಗ ಕಟ್ಟಡಗಳನ್ನು ತೆರವು ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.












