ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ,
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಶೀರ್ಷಿಕೆಯಲ್ಲಿ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡು 5 ಪುಟಗಳ ಸಾರಲೇಖವನ್ನು
ಬರೆದು ಜನವರಿ 23 ರ ಒಳಗಾಗಿ ರಿಜಿಸ್ಟರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು
ಇವರಿಗೆ ಕಳುಹಿಸಬಹುದಾಗಿದೆ. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ನೀಡಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ https://janapada.karnataka.gov.in
ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















