ಉಡುಪಿ: ಅಪರಿಚಿತ ವಾಹನ ಡಿಕ್ಕಿ; ಯುವಕ ಮೃತ್ಯು

ಉಡುಪಿ: ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.

ಸ್ಕೂಟರ್ ಗೆ ಡಿಕ್ಕಿ ಹೊಡೆದ ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ.ಮೃತ ಯುವಕನನ್ನು ಸಂತೆಕಟ್ಟೆಯ ನಿವಾಸಿ ಅನೂಶ್ ಭಂಡಾರಿ (21) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೂಶ್ ಭಂಡಾರಿ ಸೋಮವಾರ ರಾತ್ರಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಬೇರೆ ವಾಹನಗಳು ದೇಹದ ಮೇಲೆ ಹರಿದಿರುವ ಸಾಧ್ಯತೆ ಇದ್ದು ಮೃತದೇಹ ಸಂಪೂರ್ಣ ನಜ್ಜು ಗುಜ್ಜಾದ ಸ್ಥಿತಿಯಲ್ಲಿದೆ .ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಅನೂಶ್‌ ಆರು ತಿಂಗಳ ಹಿಂದೆ ಉಡುಪಿಗೆ ಬಂದಿದ್ದರು.