ಉಡುಪಿ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಕೊಲ್ಲೂರು ಮೂಲದ 45 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಈ ವ್ಯಕ್ತಿಗೆ ಸೋಂಕು ತಗಲಿದ್ದು, ಕೋವಿಡ್ 19 ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.