ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವು ಆಗಸ್ಟ್ 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಎಂ.ಜಿ.ಎಂ ಕಾಲೇಜಿನ ಟಿ.ಮೋಹನ್ ದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಮೂರನೇ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಉಡುಪಿ ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘ (ರಿ) ವಾರಂಬಳ್ಳಿ, ಬ್ರಹ್ಮಾವರ ಅಧ್ಯಕ್ಷ ದಯಾನಂದ ಬಿ.ಆರ್, ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತ ಮಯ್ಯ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಉಡುಪಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಲಿದ್ದಾರೆ.












