ಉಡುಪಿ, ಫೆ.16: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮ ಚೋರಾಡಿ ನಿವಾಸಿ ರತಿ (37) ಎಂಬ ಮಹಿಳೆಯು ಜನವರಿ 31 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ದಪ್ಪ ಶರೀರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
















