ಕಾರ್ಕಳ: ಅಕ್ಷರದಾಸೋಹ ನೌಕರರನ್ನು ಖಾಯಂ ಗೊಳಿಸಬೇಕು ಹಾಗೂ ಸರಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ, ಕಾರ್ಮಿಕ ಕಾನೂನು ತಿದ್ದುಪಡಿ ವಿರುದ್ಧ ನವೆಂಬರ್ 26 ರಂದು ಅಕ್ಷರದಾಸೋಹ ನೌಕರರು ಮುಷ್ಕರ ಮಾಡಲಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.
ಕಾರ್ಕಳದಲ್ಲಿ ಇಂದು ನಡೆದ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಸಿಐಟಿಯು ಮುಖಂಡ ಕವಿರಾಜ್ ಮಾತನಾಡಿ, ಅಕ್ಷರದಾಸೋಹ ನೌಕರರು ನ. 9 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸದ್ದಾರೆ ಎಂದು ಹೇಳಿದರು.
ಕಾರ್ಮಿಕ ಮುಖಂಡ ನಾಗೇಶ ಆಚಾರ್ಯ, ನೌಕರರ ಪ್ರಧಾನ ಕಾರ್ಯದರ್ಶಿ ಸುನಂದ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಬೇಬಿ ಭಂಡಾರಿ ವಹಿಸಿದ್ದರು. ಸುನೀತಾ ಶೆಟ್ಟಿ ಉಪಸ್ಥಿತರಿದ್ದರು. ಸಂಧ್ಯಾ ಗೋಖಲೆ ವಂದಿಸಿದರು.