ಉಡುಪಿ: ಕೋವಿಡ್ 19 ಸಂಬಂಧಿಸಿ ಗ್ರೀನ್ ಝೋನ್ ನಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7ರಿಂದ ಸಂಜೆ 7 ರ ವರೆಗೆ ಅವಕಾಶ ನೀಡಲಾಗಿದೆ. ಅದರಂತೆ ಎಂಎಸ್ ಐಎಲ್ ಹಾಗೂ ವೈನ್ ಶಾಪ್ ಮಳಿಗೆಗಳಲ್ಲಿ ಮದ್ಯ ಮಾರಾಟಕ್ಕೆ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ಅನುಮತಿ ನೀಡಲಾಗಿದೆ.
ಇಂದು ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮದ್ಯ ಮಾರಾಟಕ್ಕೆ ಬೆಳಿಗ್ಗೆ 9ರಿಂದ 1 ಗಂಟೆಯವರೆಗೆ ಅವಕಾಶ ನೀಡಲಾಗಿತ್ತು. ಆದರೆ ಆರೆಂಜ್ ಹಾಗೂ ಗ್ರೀನ್ ಝೋನ್ ನಲ್ಲಿರುವ ಇತರೆ ಜಿಲ್ಲೆಗಳಲ್ಲಿ ಇಂದೇ ಬೆಳಿಗ್ಗೆ 7ರಿಂದ ಸಂಜೆ 7 ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಹಾಗಾಗಿ ಉಡುಪಿ ಜಿಲ್ಲಾಧಿಕಾರಿಯ ನಿರ್ಧಾರ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಇಂದು ಮತ್ತೆ ನಿಯಮದಲ್ಲಿ ಮಾರ್ಪಾಡು ಮಾಡಿ, ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ