ಉಡುಪಿ: ಚಲಿಸುತ್ತಿದ್ದ ಲಾರಿಯಿಂದ ಟ್ಯಾಂಕ್ ರಸ್ತೆಗೆ ಉರುಳಿಬಿದ್ದ ಘಟನೆ ಉಡುಪಿ ಕಿನ್ನಿಮುಲ್ಕಿ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಬೃಹತ್ ಗಾತ್ರದ ಟ್ಯಾಂಕ್ ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹೆದ್ದಾರಿ ಪಕ್ಕದಲ್ಲಿ ಹಾಕುವ ಸೂಚನಾ ಫಲಕ ಅಡ್ಡ ಬಂದ ಕಾರಣ ಟ್ಯಾಂಕ್ ಹೊತ್ತ ಲಾರಿಗೆ ಮುಂದೆ ಸಾಗಲು ಸಾಧ್ಯವಾಗಿಲ್ಲ. ಎರಡು ದಿನ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಚಾಲಕ, ಲಾರಿಯನ್ನು ರಿವರ್ಸ್ ತೆಗೆದು ಬೇರೆ ರೂಟ್ ನಲ್ಲಿ ಹೋಗಲು ಪ್ರಯತ್ನ ಮಾಡಿದ್ದಾನೆ.

ಈ ಸಂದರ್ಭ ಬಾರಿ ಗಾತ್ರದ ಟ್ಯಾಂಕ್ ರಸ್ತೆಗೆ ಉರುಳಿದೆ. ಉಡುಪಿ ಟ್ರಾಫಿಕ್ ಪೊಲೀಸರು ಲಾರಿ ಚಾಲಕನಿಗೆ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ.












