ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಂಜೆ 4:00ಗೆ ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ಹಾಗೂ ಸಹಾಯಕ ಸರಕಾರಿ ಅಭಿಯೋಜಕರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ನಾಗೇಶ್ ಎನ್ಎ ಶರತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದರು.
ಈ ಸಂದರ್ಭದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಹಾಜರಿದ್ದರು.