ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಯ ಅವರನ್ನು ಉಡುಪಿಯ ಬ್ರಹ್ಮಾವರ ಠಾಣೆಯ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಹಾಜರು ಪಡಿಸಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು, ನಾಳೆ ಮಧ್ಯಾಹ್ನ 1.00 ಗಂಟೆಯ ವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.












