ಖಾಸಗಿಯಾಗಿ ನಡೆಯುತ್ತಿರುವ ಪಿ.ಜಿ.ಗಳ ಮಾಹಿತಿ ನೀಡುವಂತೆ ಸೂಚನೆ

ಉಡುಪಿ, ಆಗಸ್ಟ್ 1: ಉದ್ಯೋಗಸ್ಥ ಮಹಿಳೆಯರ ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯರ ವಾಸ್ತವ್ಯ ಸೌಲಭ್ಯಗಳ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚಿಸಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿಯಾಗಿ ನಡೆಸುತ್ತಿರುವ ಮಹಿಳೆಯರ ಮತ್ತು ಮಕ್ಕಳ ಹಾಸ್ಟೆಲ್/ಪೇಯಿಂಗ್ ಗೆಸ್ಟ್(ಪಿ.ಜಿ.)ಗಳ ಮಾಹಿತಿಯನ್ನು, ಸಂಬಂಧಿತ ವ್ಯಕ್ತಿ/ಸಂಸ್ಥೆಗಳು ನಿಗದಿತ ನಮೂನೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಗಸ್ಟ್ 31 ರೊಳಗಾಗಿ ಕಡ್ಡಾಯವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574978 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ