ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಭಾನುವಾರ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಬ್ರಹ್ಮಾವರ ತಾಲೂಕು ಪಂಚಾಯತ್ ಅಧ್ಯಕ್ಷೆ ಜ್ಯೋತಿ ಉದಯ ಕುಮಾರ್ ಮಾತನಾಡಿ, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ಬರಬೇಕು. ಇದರಿಂದ ರಾಜಕೀಯವನ್ನು ಸ್ವಾರ್ಥ ರಹಿತ ಸೇವಾ ಕ್ಷೇತ್ರವನ್ನಾಗಿ ಮಾಡಬಹುದಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಚಿತ್ರನಟಿ ಅನಿತಾ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ಸಾಧನೆ ಮಾಡಿದ ಆರ್ಥಿಕ ಕ್ಷೇತ್ರದಲ್ಲಿ ಮಾಲಿನಿ ಭಂಡಾರಿ, ಕ್ರೀಡಾ ಕ್ಷೇತ್ರದಲ್ಲಿ ಅರುಣಾ ಕಲಾ, ಸಂಘಟನೆ ಕ್ಷೇತ್ರದಲ್ಲಿ ಬೇಬಿ ಸಾಲ್ಯಾನ್, ಸಮಾಜ ಸೇವೆಯಲ್ಲಿ ಆಯಿಷಾ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ಹಫೀಜ್ ರೆಹಮಾನ್, ರಾಘವೇಂದ್ರ ನಾಯಕ್, ತಂಝಿಮ್ ಶಿರ್ವ, ಪುರಂದರ ತಿಂಗಳಾಯ ಉಪಸ್ಥಿತರಿದ್ದರು.