udupixpress
Home Trending ಜಿಲ್ಲಾಸ್ಪತ್ರೆಯಲ್ಲಿ‌ ಮೃತಪಟ್ಟ ಬನ್ನಂಜೆ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್: ಡಿಎಚ್ಒ 

ಜಿಲ್ಲಾಸ್ಪತ್ರೆಯಲ್ಲಿ‌ ಮೃತಪಟ್ಟ ಬನ್ನಂಜೆ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್: ಡಿಎಚ್ಒ 

ಉಡುಪಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮೇ 16ರಂದು ಮೃತಪಟ್ಟಿದ್ದ ಬನ್ನಂಜೆಯ 44 ವರ್ಷದ ವ್ಯಕ್ತಿಯ ವೈದ್ಯಕೀಯ ವರದಿ ಇಂದು ಬಂದಿದ್ದು, ಅದರಲ್ಲಿ ವ್ಯಕ್ತಿ ಹೃದಯಾಘಾತದಿಂದ ಸಾವನ್ನಾಪ್ಪಿದ್ದಾರೆಂದು ದೃಢಪಟ್ಟಿದೆ. ಅಲ್ಲದೆ, ಮೃತ ವ್ಯಕ್ತಿಯ ಕೊರೊನಾ ಪರೀಕ್ಷಾ ವರದಿಯಲ್ಲೂ ನೆಗೆಟಿವ್ ಬಂದಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ವ್ಯಕ್ತಿಗೆ ಹೃದಯ ಸಂಬಂಧಿ ಕಾಯಿಲೆಯ ಜತೆಗೆ ಶೀತ,ಕೆಮ್ಮು ಹಾಗೂ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಹಾಗಾಗಿ ಮೃತ ವ್ಯಕ್ತಿಯ ಗಂಟಲಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಸಂಜೆ ಬಂದಿದ್ದು, ಅದರಲ್ಲಿ ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
error: Content is protected !!